ಹಾಂಗ್ ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಭಾರತ ತಂಡ ಹ್ಯಾಟ್ರಿಕ್ ಸೋಲುಂಡಿದೆ. ಮೊದಲ ಮ್ಯಾಚ್ನಲ್ಲಿ ಪಾಕಿಸ್ತಾನ್ ವಿರುದ್ಧ ಸೋತಿದ್ದ ಟೀಮ್ ಇಂಡಿಯಾ ಇಂದು ಯುಎಇ ವಿರುದ್ಧ 6 ವಿಕೆಟ್ಗಳಿಂದ ಪರಾಜಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ ತಂಡ ಕೂಡ ರೋಚಕ ಜಯ ಸಾಧಿಸಿದೆ.

ಹಾಂಗ್ ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ದಾಂಡಿಗ ರಾಹುಲ್ ತ್ರಿಪಾಠಿ ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಹುಲ್ ಕೇವಲ 12 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.
ಮೌಂಗ್ ಕಾಕ್‌ನ ಮಿಷನ್ ರೋಡ್ ಗ್ರೌಂಡ್ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೃನಾಲ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಮಾರ್ಟಿನ್ ಅ್ಯಂಡರ್ಸನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಮೊದಲ ಓವರ್ನಿಂದಲೇ ಟೀಮ್ ಇಂಡಿಯಾ ಬೌಲರ್ಗಳನ್ನು ದಂಡಿಸಿದ ಮಾರ್ಟಿನ್ ಕೇವಲ 13 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಫೋರ್ಗಳೊಂದಿಗೆ 51 ರನ್ ಚಚ್ಚಿದರು. ಇನ್ನು ಎಡ್ ಬರ್ನಾಡ್ 14 ಎಸೆತಗಳಲ್ಲಿ 35 ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ ನಿಗದಿತ 6 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್ ಕಲೆಹಾಕಿತು.

