Public News 18
athelitics Breaking News Cricket Headlines Latest Updates Live News Sports Top Stories Trending

ಅರ್ಷದೀಪ್‌ಗೆ 4 ವಿಕೆಟ್, ಕೊಹ್ಲಿ 74 ರನ್; 2 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಗೆದ್ದ ಅನ್ಶುಲ್ ಕಾಂಬೋಜ್‌

ಆಕ್ಲೆಂಡ್‌ನಲ್ಲಿ ನಡೆದ ಮೊದಲ ODIನಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಅಚ್ಚರಿ ಎಂಬಂತೆ, ಭರ್ಜರಿ ಬ್ಯಾಟಿಂಗ್ ಮಾಡಿದ ಕೊಹ್ಲಿ ಹಾಗೂ ನಾಲ್ಕು ವಿಕೆಟ್ ಪಡೆದ ಅರ್ಷದೀಪ್‌ರನ್ನು ಮೀರಿಸಿ ಅನ್ಶುಲ್ ಕಾಂಬೋಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಅವರ 10 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ, 2 ವಿಕೆಟ್ ಕಬಳಿಸಿದ ಮಿತವ್ಯಯದ ಬೌಲಿಂಗ್ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಆಕ್ಲೆಂಡ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತು. ಮೊದಲು ಬೌಲರ್‌ಗಳು ತಮ್ಮ ಅದ್ಭುತ ಪ್ರದರ್ಶನದ ಮೂಲಕ ನ್ಯೂಜಿಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರು. ಬಳಿಕ ಶುಭ್​ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ಸುಲಭವಾಗಿ ಗೆಲುವಿನ ದಡ ಸೇರಿತು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರೆ, ವಿರಾಟ್ ಕೊಹ್ಲಿ ಕೇವಲ 51 ಎಸೆತಗಳಲ್ಲಿ 74 ರನ್ ಸಿಡಿಸಿ ಮಿಂಚಿದರು. ಆದರೆ ಅಚ್ಚರಿಯ ಸಂಗತಿಯೆಂದರೆ, ಎರಡು ವಿಕೆಟ್ ಪಡೆದ ಅನ್ಶುಲ್ ಕಾಂಬೋಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು. ಹಾಗಾದರೆ, ಹೆಚ್ಚು ವಿಕೆಟ್ ಪಡೆದ ಬೌಲರ್ ಮತ್ತು ಸ್ಫೋಟಕ ಬ್ಯಾಟಿಂಗ್ ಮಾಡಿದ ಕೊಹ್ಲಿಯನ್ನು ಹಿಂದಿಕ್ಕಿ ಕಾಂಬೋಜ್ ಈ ಪ್ರಶಸ್ತಿ ಗೆದ್ದಿದ್ದೇಕೆ?

ಅನ್ಶುಲ್ ಕಾಂಬೋಜ್‌ಗೆ ಪಂದ್ಯಶ್ರೇಷ್ಠ ಗೌರವ

ಅನ್ಶುಲ್ ಕಾಂಬೋಜ್ ಅವರ ಮಿತವ್ಯಯದ ಬೌಲಿಂಗ್ ಪ್ರದರ್ಶನವೇ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ತಂದುಕೊಟ್ಟಿತು. ಅವರು ತಮ್ಮ 10 ಓವರ್‌ಗಳ ಕೋಟಾದಲ್ಲಿ ಕೇವಲ 22 ರನ್ ನೀಡಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. ವಿಶೇಷವೆಂದರೆ, ತಮ್ಮ ಬೌಲಿಂಗ್‌ನಲ್ಲಿ ಬರೋಬ್ಬರಿ 46 ಎಸೆತಗಳಲ್ಲಿ ಯಾವುದೇ ರನ್ ಬಿಟ್ಟುಕೊಡಲಿಲ್ಲ. ಆಕ್ಲೆಂಡ್ ಮೈದಾನದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ ಕಾಂಬೋಜ್, ತಮ್ಮ ಶಾರ್ಟ್ ಲೆಂಗ್ತ್ ಎಸೆತಗಳ ಮೂಲಕ ನ್ಯೂಜಿಲೆಂಡ್ ಬ್ಯಾಟರ್‌ಗಳನ್ನು ಕಟ್ಟಿಹಾಕಿದರು. ಅಲ್ಲದೆ, ಮಿಚೆಲ್ ಸ್ಯಾಂಟ್ನರ್ ಮತ್ತು ನಾಥನ್ ಸ್ಮಿತ್ ಅವರ ವಿಕೆಟ್‌ಗಳನ್ನು ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Share

Related posts

Leave a Comment